ಕೊಪ್ಪಳ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳೂರು ರಸ್ತೆ ಬಳಿ ನಡೆದಿದೆ.
ಬೈಕ್ ಸವಾರರಾದ ಗಣೇಶ್ (22), ರಾಧಿಕಾ (21) ಮೃತ ದುರ್ದೈವಿಗಳು. ಕುಕನೂರು ತಾಲೂಕಿನ ದ್ಯಾಂಪುರ ಗ್ರಾಮದವರು ಎನ್ನಲಾದ ಇವರು ಕೊಪ್ಪಳದ ಜಾತ್ರೆ ಮುಗಿಸಿ ವಾಪಸ್ ಹೊರಟಿದ್ದರು. ಈ ಸಂದರ್ಭದಲ್ಲಿ ಕೋಳೂರು ರಸ್ತೆಯ ಬಳಿಯ ಬೈಪಾಸ್ನಲ್ಲಿ ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಹಿನ್ನೆಲೆ ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.