ಗಂಗಾವತಿ: ಕಳ್ಳತನ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡು ಸರಣಿ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.
ಕಳ್ಳರಿಂದ ಒಟ್ಟು ಎರಡು ಲಕ್ಷ ರೂ. ಮೌಲ್ಯದ 10 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದದ್ದನ್ನು ಗಮನಿಸಿದ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ಓದಿ-ಫೇಕ್ ಫೇಸ್‌ಬುಕ್ ಐಡಿ; 14 ಲಕ್ಷ ರೂ. ದೋಚಿದ 'ಸುಶ್ಮಾ' !
ಬಳಿಕ ಮತ್ತೊಬ್ಬ ಆರೋಪಿಯೊಂದಿಗೆ ಸೇರಿ ಬೈಕ್ಗಳನ್ನು ಕಳ್ಳತನ ಮಾಡಿದ್ದಾಗಿ ಆರೋಪಿ ವಿಚಾರಣೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದಾನೆ. ದಾಸನಾಳದಲ್ಲಿ ಏಳು, ಗಿಣಿಗೇರಾದಲ್ಲಿ ಎರಡು ಹಾಗೂ ಇನ್ನೊಂದು ಸ್ಥಳದಲ್ಲಿ ಒಂದು ಬೈಕ್ ಕದ್ದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದು, 2 ಲಕ್ಷ ರೂ. ಮೌಲ್ಯದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಆರೋಪಿಗಳ ಹೆಸರು, ಭಾವಚಿತ್ರ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಮೇಲಾಧಿಕಾರಿಗಳ ಸೂಚನೆ ಇದ್ದು, ಆರೋಪಿಗಳ ಮಾಹಿತಿ ಬಹಿರಂಗಪಡಿಸದಂತೆ ನಿರ್ದೇಶನವಿದೆ ಎಂದು ಪೊಲೀಸರು ತಿಳಿಸಿದ್ದಾರೆ.