ಕೊಪ್ಪಳ: ಲಡಾಖ್ ನಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಬಿಜೆಪಿ ಮುಖಂಡ ಅಮರೇಶ ಕರಡಿ ನೇತೃತ್ವದಲ್ಲಿ ನಗರದ ಅಶೋಕ ಸರ್ಕಲ್‌ನಲ್ಲಿ ಮೇಣದ ಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ, ಮೌನಾಚರಣೆ ಮಾಡಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿಕೋರಿದರು.
ಚೀನಾದ ವಸ್ತುಗಳನ್ನು ಬಹಿಷ್ಕರಿಸೋಣ, ಸ್ವದೇಶಿ ವಸ್ತುಗಳನ್ನು ಬಳಸಿ ದೇಶವನ್ನು ಉಳಿಸೋಣ ಎಂಬ ಘೋಷಣೆಯನ್ನು ಕೂಗಿದರು.ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.