ETV Bharat / state

ವಿಪ್ ಉಲ್ಲಂಘಿಸಿದ ಮೂವರು ಬಿಜೆಪಿ ಸದಸ್ಯರು: ಸದಸ್ಯತ್ವ ರದ್ದುಪಡಿಸುವಂತೆ ಬಿಜೆಪಿ ದೂರು

author img

By

Published : Dec 5, 2020, 7:44 PM IST

ಕಳೆದ ನವೆಂಬರ್ 6 ರಂದು ನಡೆದ ಭಾಗ್ಯನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಮೂವರು ಬಿಜೆಪಿ ಸದಸ್ಯರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಕೈಗೊಂಡು ಅವರ ಸದಸ್ಯತ್ವವನ್ನು ರದ್ದು ಮಾಡಬೇಕೆಂದು ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗೆ ಇಂದು ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

BJP complains that it has canceled the membership of three BJP members who violated the whip
ವಿಪ್ ಉಲ್ಲಂಘಿಸಿದ ಮೂವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಪಡಿಸುವಂತೆ ಬಿಜೆಪಿ ದೂರು

ಕೊಪ್ಪಳ: ಜಿಲ್ಲೆಯ ಭಾಗ್ಯನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಮೂವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಪಡಿಸುವಂತೆ ಬಿಜೆಪಿ ದೂರು ಸಲ್ಲಿಸಿದೆ.

ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಇಂದು ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದಾರೆ. ಕಳೆದ ನವೆಂಬರ್ 6 ರಂದು ನಡೆದ ಭಾಗ್ಯನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯರಾದ ಸುರೇಶ್ ದರಗದಕಟ್ಟಿ, ನೇಮಣ್ಣ ಬನ್ನಿಕಲ್ಲಪ್ಪ ಬಿದರೂರ್ ಹಾಗೂ ಶೇಖಮ್ಮ ಸೋಮಣ್ಣ ದೇವರಮನಿ ಅವರ ವಿಪ್ ಉಲ್ಲಂಘಿಸಿದ್ದಾರೆ. ಈ ಮೂವರು ಸದಸ್ಯರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಕ್ರಮ ಕೈಗೊಂಡು ಅವರ ಸದಸ್ಯತ್ವ ರದ್ದು ಮಾಡಬೇಕೆಂದು ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗೆ ಇಂದು ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ರಾಜು ಬಾಕಳೆ, ಕೊಪ್ಪಳ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಪ್ರದೀಪ ಹಿಟ್ನಾಳ, ನ್ಯಾಯವಾದಿ ಶಂಕರ ಸಿಂಗ್ರಿ, ಗ್ರಾಮೀಣ ಮಂಡಲ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೀಮಣ್ಣ ಹೀರೆಮನಿ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.