ಕುಷ್ಟಗಿ(ಕೊಪ್ಪಳ): ಕರ್ನಾಟಕ ಜನ ಸಂಪರ್ಕ ರ‍್ಯಾಲಿಯ ಸಮಾರೋಪ ಸಮಾರಂಭ ಹಾಗೂ ಜನ ಸಂವಾದ ಕಾರ್ಯಕ್ರಮದ ನೇರಪ್ರಸಾರವನ್ನು ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ವೀಕ್ಷಿಸಲಾಯಿತು.
ಈ ವೇಳೆ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಮಾತನಾಡಿ, ಕೊರೊನಾ ಸೋಂಕು ಈಗಾಗಲೇ ಸಮುದಾಯಕ್ಕೆ ಹಬ್ಬುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತರು ವೈಯಕ್ತಿಕವಾಗಿ ಸ್ವಚ್ಚತೆ ಕಾಪಾಡಿಕೊಳ್ಳುತ್ತ ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕತೆ ಹಿತದೃಷ್ಟಿಯಿಂದ ಆತ್ಮನಿರ್ಭರ ಭಾರತ ಅಭಿಯಾನವನ್ನು ಜಾರಿಗೆ ತಂದಿರುವುದು ಚಿಕ್ಕ ವಿಷಯವಲ್ಲ. ನಮ್ಮ ದೇಶದ ವಸ್ತುಗಳನ್ನು ಗ್ಲೋಬಲ್ ಬ್ರ್ಯಾಂಡ್ ಮಾಡುವ ನಿಟ್ಟಿನಲ್ಲಿ ಉತ್ತಮ ಹೆಜ್ಜೆ ಇದು ಎಂದು ಇದೇ ವೇಳೆ ಅವರು ಹೇಳಿದರು.
ಮಾಜಿ ಶಾಸಕ ಕೆ.ಶರಣಪ್ಪ, ಜಿ.ಪಂ.ಸದಸ್ಯ ಕೆ.ಮಹೇಶ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.