ಕೊಪ್ಪಳ: ಕೊಪ್ಪಳದಲ್ಲಿಯೂ ಕೂಡ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ನಗರದಲ್ಲಿ ಇಂದು ಬಿಜೆಪಿ ಬೃಹತ್ ರ್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದೆ.
ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ನಾಮಪತ್ರ ಸಲ್ಲಿಸಿದ ಬಳಿಕ ನಗರದಲ್ಲಿ ಬೃಹತ್ ರ್ಯಾಲಿ ನಡೆಸಿದರು. ಗವಿಮಠದ ಬಳಿಯಿಂದ ಆರಂಭವಾದ ಈ ರ್ಯಾಲಿಯಲ್ಲಿ ಅಭ್ಯರ್ಥಿ ಸಂಗಣ್ಣ ಕರಡಿ, ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು.
ಮೆರವಣಿಗೆಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಕೇಸರಿ ಟೋಪಿ ಧರಿಸಿ, ಬಿಜೆಪಿ ಬಾವುಟ ಹಿಡಿದು ಸಾಗಿದರು. ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರಡಿ ಸಂಗಣ್ಣ ಕರಡಿ ಪರವಾಗಿ ಘೋಷಣೆ ಕೂಗಿದರು. ಅಲ್ಲದೆ ಸಂಗಣ್ಣ ಕರಡಿಗೆ ಮತ ನೀಡುವಂತೆ ಮನವಿ ಮಾಡಿದರು.