ಕೊಪ್ಪಳ: ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಜಿಲ್ಲೆಯ ಕಾರಟಗಿಯಲ್ಲಿ ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕಾರಟಗಿಯ ನವಲಿ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಇದೇ ವೇಳೆ ಮಾತನಾಡಿದ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನರು ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಉಳಿದ ಮೂರುವರೆ ವರ್ಷದ ಆಡಳಿತದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಮತದಾರರು ನಮ್ಮ ಸರ್ಕಾರದ ಬೆನ್ನುತಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿಯೂ ಜನರು ಬಿಜೆಪಿ ಕೈಹಿಡಿಯಲಿದ್ದಾರೆ ಎಂಬುದು ಈ ಚುನಾವಣೆಯಿಂದ ಗೊತ್ತಾಗುತ್ತದೆ ಎಂದಿದ್ದಾರೆ.