ಕೊಪ್ಪಳ: ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಫೋಟೋ ಇಟ್ಟು ವಾಮಾಚಾರ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಕಾರಟಗಿ ಪುರಸಭೆ ಚುನಾವಣೆಯ ಕಾರಣ 10ನೇ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮೇಗೂರು ಫೋಟೋ ಇಟ್ಟು ವಾಮಾಚಾರ ಮಾಡಲಾಗಿದೆ.
ಕಾರಟಗಿ ಪಟ್ಟಣದಲ್ಲಿ ಮಂಜುನಾಥ್ ಸೋಲಲಿ ಎಂದು ಯಾರೋ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎನ್ನಲಾಗ್ತಿದೆ.
ನಾಳೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ:
ನಾಳೆ (ಸೋಮವಾರ) ಜಿಲ್ಲೆಯಲ್ಲಿ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪುರಸಭೆ, ಭಾಗ್ಯನಗರ, ಕನಕಗಿರಿ, ತಾವರಗೇರಾ ಹಾಗೂ ಕುಕನೂರು ಪಟ್ಟಣ ಪಂಚಾಯತಿಗೆ ಚುನಾವಣೆ ನಡೆಯಲಿದೆ.
ಈ ಐದು ನಗರ ಸ್ಥಳೀಯ ಸಂಸ್ಥೆಗಳಲ್ಲಿ 96 ವಾರ್ಡ್ಗಳಿದ್ದು, 6 ವಾರ್ಡ್ಗಳಲ್ಲಿ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತದಾನ ನಡೆಯಲಿದ್ದು, 100 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಮತದಾರರ ವಿವರ:
- 38,478- ಪುರುಷ
- 39,176 ಮಹಿಳೆಯರು
- 1 ಇತರೆ ಸೇರಿ,
ಒಟ್ಟು 77,655 ಮತದಾರರು ಮತ ಚಲಾಯಿಸಲಿದ್ದಾರೆ.
ಮತದಾನಕ್ಕೆ ಅಂತಿಮ ಹಂತದ ಸಿದ್ಧತೆಯಾಗಿ ಸಿಬ್ಬಂದಿ ಮತಯಂತ್ರಗಳನ್ನು ತೆಗೆದುಕೊಂಡು ಮತದಾನ ಕೇಂದ್ರಗಳಿಗೆ ತೆರಳಿದರು. ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.