ETV Bharat / state

ಎತ್ತಿನ ಮೈ ತೊಳೆಯಲು ಹೋದ ಬಾಲಕ ಶವವಾಗಿ ಪತ್ತೆ - ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಎತ್ತಿನ ಮೈ ತೊಳೆಯಲು ಹೊಲಕ್ಕೆ ಹೋದ ಬಾಲಕ ಆಯತಪ್ಪಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಕುಷ್ಟಗಿ ತಾಲೂಕಿನ ಮೆಣಸಗೇರಾದಲ್ಲಿ ಈ ಘಟನೆ ನಡೆದಿದೆ.

dead body of boy
ಬಾಲಕನ ಶವ
author img

By

Published : Sep 29, 2020, 12:37 AM IST

ಕುಷ್ಟಗಿ (ಕೊಪ್ಪಳ): ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಮೆಣಸಗೇರಾದಲ್ಲಿ ನಡೆದಿದೆ.

ದೇವೇಂದ್ರಪ್ಪ (ಮುತ್ತಪ್ಪ) ಯಲಗುದರಪ್ಪ ದಾಸಬಾಳ (14) ಮೃತ ಬಾಲಕ. ಸೋಮವಾರದ ಹಿನ್ನೆಲೆ ತಮ್ಮ ಜಮೀನಿನ ಕೃಷಿ ಹೊಂಡದಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.

ಹೊಲಕ್ಕೆ ಹೋದ ಬಾಲಕ ಮರಳಿ ಮನೆಗೆ ಬಾರದ ಹಿನ್ನೆಲೆ ಮನೆಯವರು ಹುಡುಕಾಟ ನಡೆಸಿದ್ದರು. ಕೃಷಿ ಹೊಂಡದ ಬಳಿ ಎತ್ತು ಮಾತ್ರ ನಿಂತಿತ್ತು. ಅನುಮಾನಗೊಂಡು ಕೃಷಿ ಹೊಂಡದಲ್ಲಿ ಬಾಲಕನ ತಂದೆ ಹುಡುಕಿದಾಗ ಶವ ಪತ್ತೆಯಾಗಿದೆ.

ಬಾಲಕ ದೇವೇಂದ್ರಪ್ಪ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಗನ ಅಕಾಲಿಕ ಮರಣಕ್ಕೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಕುಷ್ಟಗಿ ತಾಲೂಕಾ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪಾರ್ಥಿವ ಶರೀರವನ್ನು ಕುಟುಂದವರಿಗೆ ಹಸ್ತಾಂತರಿಸಲಾಯಿತು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.