ಕೊಪ್ಪಳ: ನಿನ್ನೆ ಸುರಿದ ಮಳೆಯಿಂದಾಗಿ ನಿರ್ಮಾಣದ ಹಂತದಲ್ಲಿದ್ದ ಸೇತುವೆಯೊಂದು ಕೊಚ್ಚಿ ಹೋಗಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದ ಬಳಿ ಸುಮಾರು 5 ಕೋಟಿ ರುಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯ ಪರಿಣಾಮ ಹಳ್ಳಕ್ಕೆ ವ್ಯಾಪಕವಾಗಿ ನೀರು ಹರಿದು ಬಂದಿತ್ತು, ನೀರಿನ ರಭಸಕ್ಕೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ.
ಸೇತುವೆ ಕೊಚ್ಚಿ ಹೋದ ಪರಿಣಾಮ ತಾವರಗೇರಾ ಮತ್ತು ದೋಟಿಹಾಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಸೇತುವೆ ಇಲ್ಲವಾದ್ದರಿಂದ ಹರಿಯುವ ನೀರಿನಲ್ಲಿಯೇ ಕುರಿಗಾಹಿಗಳು ತಮ್ಮ ಕುರಿಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆ ಕುರಿಗಳನ್ನು ದಾಟಿಸಲು ಪರದಾಡಿದರು.