ETV Bharat / state

ಬಿಎಸ್‌ವೈ ಹ್ಯಾಟ್ರಿಕ್‌ ಮಾಡ್ತಾರಂತೆ.. ಅದ್ಹೇಗೆ ಅಂತಾ ಕೈ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಹೇಳ್ತಾರೆ..

2008 ಮತ್ತು 2018ರಲ್ಲಿ ಯಡಿಯೂರಪ್ಪ ಅವರು ಮೆಜಾರಿಟಿ ಇಲ್ಲದೆ ಸರ್ಕಾರ ರಚಿಸಲು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಬಹುಮತವಿಲ್ಲದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈ ಬಾರಿಯೂ ಅದೇ ರೀತಿ ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿರುವಂತಿದೆ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವ್ಯಂಗ್ಯವಾಡಿದ್ದಾರೆ.

author img

By

Published : Jul 26, 2019, 4:52 PM IST

MLA Raghavendra Hitnal

ಕೊಪ್ಪಳ : ಮೆಜಾರಿಟಿ ಇಲ್ಲದೆ ಬಿ.ಎಸ್‌ ಯಡಿಯೂರಪ್ಪ ಸರ್ಕಾರ ರಚಿಸಲು ಮುಂದಾಗಿದ್ದು, ಪ್ರಮಾಣವಚನ ಸ್ವೀಕರಿಸಿ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿದ್ದಾರೆ ಎಂದು ಕೊಪ್ಪಳದ ಕಾಂಗ್ರೆಸ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವ್ಯಂಗ್ಯವಾಡಿದ್ದಾರೆ.

ಕೊಪ್ಪಳದ ಕಾಂಗ್ರೆಸ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂವರು ಶಾಸಕರು ಅನರ್ಹಗೊಂಡಿದ್ದು, ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತುಪಡಿಸಲು 111 ಜನ ಶಾಕರು ಬೇಕಾಗಿದ್ದಾರೆ. ಆದರೆ, ಅವರು ಯಾವ ರೀತಿ ಬಹುಮತ ಸಾಬೀತು ಮಾಡುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ. ಅವರು 105 ಜನ ಶಾಸಕರನ್ನು ಇಟ್ಟುಕೊಂಡು ಸರ್ಕಾರ ರಚಿಸಲು ಹೊರಟಿದ್ದಾರೆ.

ಇದು ಹೇಗೆ ಸಾಧ್ಯ. 2008 ಮತ್ತು 2018ರಲ್ಲಿ ಸಹ ಮೆಜಾರಿಟಿ ಇಲ್ಲದೆ ಸರ್ಕಾರ ರಚಿಸಲು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಬಹುಮತವಿಲ್ಲದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈ ಬಾರಿಯೂ ಅದೇ ರೀತಿಯಾಗಲಿದ್ದು, ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿರುವಂತಿದೆ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪನವರು ಯಾವ ಲೆಕ್ಕದಲ್ಲಿ ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ ಎಂಬುದು ನನಗೆ ತಿಳಿಯುತ್ತಿಲ್ಲ. ಅವರದು ಆತುರದ ನಿರ್ಧಾರ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Intro:Body:ಕೊಪ್ಪಳ:- ಮೆಜಾರಿಟಿ ಇಲ್ಲದೆ ಯಡಿಯೂರಪ್ಪ ಸರ್ಕಾರ ಮಾಡಲು ಹೊರಟಿದ್ದು, ಪ್ರಮಾಣವಚನ ಸ್ವೀಕರಿಸಿ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿದ್ದಾರೆ ಎಂದು ಕೊಪ್ಪಳದ ಕಾಂಗ್ರೆಸ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರ ಜನ ಶಾಸಕರು ಈಗ ಅನರ್ಹಗೊಂಡಿದ್ದಾರೆ. ಈಗ ಅವರಿಗೆ ಬಹುಮತ ಸಾಬೀತುಪಡಿಸಲು ಬೇಕಾಗಿರೋದು 111 ಜನ ಶಾಸಕರು. ಆದರೆ, ಅವರು ಯಾವ ರೀತಿಯಾಗಿ ಬಹುಮತ ಸಾಬೀತು ಮಾಡುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ. ಅವರು 105 ಜನ ಶಾಸಕರನ್ನು ಇಟ್ಟುಕೊಂಡು ಸರ್ಕಾರ ರಚಿಸಲು ಹೊರಟಿದ್ದಾರೆ. ಇದು ಹೇಗೆ ಸಾಧ್ಯ? 2008 ಮತ್ತು 2018 ರಲ್ಲಿ ಸಹ ಮೆಜಾರಿಟಿ ಇಲ್ಲದೆ ಸರ್ಕಾರ ರಚಿಸಲು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಬಹುಮತವಿಲ್ಲದೆ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಟ್ಟರು. ಈ ಬಾರಿಯೂ ಅದೇ ತೆರನಾಗಿ ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿರುವಂತಿದೆ ಎಂದು ವ್ಯಂಗ್ಯವಾಡಿದರು. ಅಲ್ಲದೆ, ಅವರು ಯಾವ ಲೆಕ್ಕದಲ್ಲಿ ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ ಎಂಬುದು ನನಗೆ ತಿಳಿಯುತ್ತಿಲ್ಲ. ಅವರದು ಆತುರದ ನಿರ್ಧಾರ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಭಿಪ್ರಾಯಪಟ್ಟರು.

ಬೈಟ್1:- ಕೆ.‌ ರಾಘವೇಂದ್ರ ಹಿಟ್ನಾಳ, ಕೊಪ್ಪಳದ ಕಾಂಗ್ರೆಸ್ ಶಾಸಕ.
-------------
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.