ಕೊಪ್ಪಳ : ಜಿಲ್ಲೆಯ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ವೊಂದು ಪಲ್ಟಿಯಾಗಿ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಯಾದಗಿರಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಕೆ.ಎ. 33, ಎಫ್ 0403 ನಂಬರಿನ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ನರೇಗಲ್ - ಗಜೇಂದ್ರಗಡ ಮಾರ್ಗ ಮಧ್ಯದ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಲ್ಟಿಯಾಗಿದೆ.
ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗ ಜಿಲ್ಲಾಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಲಾಗಿದೆ. ಚಾಲಕನ ಅಜಾಗರೂಕತೆಯೋ ಅಥವಾ ನಿದ್ದೆ ಮಂಪರಿನಿಂದ ಈ ಘಟನೆಗೆ ನಡೆದಿದೆಯೋ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.