ಕೊಪ್ಪಳ: ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿ ಇನ್ನೂ 13 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಕುಮಾರ ಕಣವಿ ಹಾಗೂ ಹನುಮಂತಪ್ಪ ಕಕ್ಕೂರು ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಳವಂಡಿ ಠಾಣೆ ಪೊಲೀಸರು ಇಬ್ಬರನ್ನ ಬಂಧಿಸಿ, ಆರೋಪಿಗಳಿಂದ ಒಟ್ಟು 9,200 ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಐಪಿಎಲ್ ಬೆಟ್ಟಿಂಗ್ ಕಟ್ಟಿದವರ ಹೆಸರು ಹಾಗೂ ಮಾಹಿತಿ ಕಲೆ ಹಾಕಿದ್ದಾರೆ. ಈ ಸಂಬಂಧ 13 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಸುಳ್ಯ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ