ETV Bharat / state

ಸಿಮೆಂಟ್​ ರಸ್ತೆ, ಡ್ರೈನೇಜ್ ಕಾಮಗಾರಿ ಕಳಪೆ ; ಸ್ಥಳೀಯರಿಂದ ದಿಢೀರ್ ಪ್ರತಿಭಟನೆ - Gangavathi protest

ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಬೇಕು. ತಪ್ಪಿತಸ್ಥ ಗುತ್ತಿಗೆದಾರ ಮತ್ತು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು..

Gangavathi
ಗಂಗಾವತಿ
author img

By

Published : Sep 1, 2020, 10:18 PM IST

ಗಂಗಾವತಿ : ನಗರದ 20ನೇ ವಾರ್ಡ್​ ಚಲುವಾದಿ ಓಣಿಯಲ್ಲಿ ನಗರಸಭೆಯ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಸಿಮೆಂಟ್ ಕಾಂಕ್ರೀಟ್ ರಸ್ತೆ ಮತ್ತು ಡ್ರೈನೇಜ್ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿವೆ ಎಂದು ಆರೋಪಿಸಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದರು.

ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಮಹಿಳೆಯರು ಕಾಮಗಾರಿ ತಡೆದು ಪ್ರತಿಭಟಿಸಿದರು. ಕಾಮಗಾರಿಗೆ ಬಳಸುತ್ತಿರುವ ಸಿಮೆಂಟ್, ಮರಳು ಮತ್ತು ಜಲ್ಲಿ ಕಲ್ಲಿನ ಪ್ರಮಾಣದ ಬಗ್ಗೆ ಕೇಳಿದರೆ ಗುತ್ತಿಗೆದಾರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಸ್ಥಳೀಯ ಮುಖಂಡ ಹನುಮಂತಪ್ಪ ಮೂಳೆ ಆರೋಪಿಸಿದ್ದಾರೆ.

ಈ ಬಗ್ಗೆ ಕೂಡಲೇ ನಗರಸಭೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್‌ ಆರ್‌ ಪಾಟೀಲ್ ಅವರಿಗೆ ಮಾಹಿತಿ ನೀಡಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರಾದ ರೇಣುಕಮ್ಮ, ಗಂಗಮ್ಮ, ಹುಲಿಗೆಮ್ಮ, ಚೌಡಮ್ಮ, ಕಳಕವ್ವ ಕಾಳಿ ಆರೋಪಿಸಿದರು.

ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಬೇಕು. ತಪ್ಪಿತಸ್ಥ ಗುತ್ತಿಗೆದಾರ ಮತ್ತು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವಾರ್ಡ್​ನ ನಿವಾಸಿಗಳು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.