ETV Bharat / state

ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಗಾದಿ..! - koppal news

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರನ್ನು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರನ್ನಾಗಿ ಹಾಗೂ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ಧಡೇಸೂಗೂರು ಅವರನ್ನು ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ‌.

Chairman of the corporation-board for two MLAs of Koppal district
ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಗಾದಿ..!
author img

By

Published : Jul 27, 2020, 5:37 PM IST

ಕೊಪ್ಪಳ: ಯಡಿಯೂರಪ್ಪ ಸರ್ಕಾರ ವರ್ಷ ಪೂರೈಸಿದ ಬೆನ್ನಲ್ಲೇ, ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಗಾದಿ ದೊರಕಿದೆ.

ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಗಾದಿ..!

ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿ ಹಾಗೂ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ಧಡೇಸೂಗೂರು ಅವರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಗಾದಿ ದೊರಕಿದೆ. ಪರಣ್ಣ ಮುನವಳ್ಳಿ ಅವರನ್ನು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರನ್ನಾಗಿ ಹಾಗೂ ಬಸವರಾಜ ಧಡೇಸೂಗೂರು ಅವರನ್ನು ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ‌. ಜಿಲ್ಲೆಯಲ್ಲಿರುವ ಮೂವರು ಬಿಜೆಪಿ ಶಾಸಕರಲ್ಲಿ ಇಬ್ಬರಿಗೆ ಈಗ ಸ್ಥಾನಮಾನ ಸಿಕ್ಕಿದೆ. ಯಲಬುರ್ಗಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್​ಗೆ ಮುಂದೆ ಸಚಿವ ಸ್ಥಾನದ ಅದೃಷ್ಟ ಇರಬಹುದಾ ಎಂಬ ಚರ್ಚೆ ಶುರುವಾಗಿದೆ.

Chairman of the corporation-board for two MLAs of Koppal district
ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಗಾದಿ..!
Chairman of the corporation-board for two MLAs of Koppal district
ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಗಾದಿ..!

ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಕನಕಗಿರಿ ಶಾಸಕ ಬಸವರಾಜ ಧಡೇಸೂಗೂರು, ನನಗೆ ಅತ್ಯಂತ ಖುಷಿಯಾಗಿದೆ. ಸಿಎಂ ಯಡಿಯೂರಪ್ಪ ಅವರು ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ. ಅವರ ಮಾರ್ಗದರ್ಶನದಲ್ಲಿ ಮಂಡಳಿಯ ಮೂಲಕ ಯಾರಿಗೆ ಸೌಲಭ್ಯಗಳನ್ನು ತಲುಪಿಸಬೇಕೋ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.