ಕೊಪ್ಪಳ: ಕುಷ್ಟಗಿ ತಾಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣದಲ್ಲಿ ಸಾಕಷ್ಟು ಗೋಲ್ಮಾಲ್ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದ್ದಾರೆ.
ಕುಷ್ಟಗಿ ತಾಲೂಕಿನಲ್ಲಿ ಅಂತರ್ಜಲ ಕುಸಿತವಾಗಿದೆ. ಬೇಸಿಗೆ ಬಂದ್ರೆ ಕುಡಿಯುವ ನೀರಿಗೂ ತತ್ವಾರ. ಉದ್ಯೋಗ ಖಾತ್ರಿ ಯೋಜನೆ 2018-19ನೇ ಸಾಲಿನಲ್ಲಿ ತಾಲೂಕಿನಲ್ಲಿ 635 ಚೆಕ್ ಡ್ಯಾಂ ನಿರ್ಮಾಣ ಮಾಡಬೇಕಿತ್ತು. ಆದರೆ, ಕೆಲವೆಡೆ ಚೆಕ್ ಡ್ಯಾಂನ ಸರಿಯಾಗಿ ನಿರ್ಮಾಣ ಮಾಡದ ಹಿನ್ನೆಲೆ ಮಳೆಯಾದರೂ ಹನಿ ನೀರು ನಿಂತಿಲ್ಲ. ಕಳಪೆ ಮಟ್ಟದಲ್ಲಿ ಕೆಲಸ ಮಾಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಅವರಿಂದಲೇ ಚೆಕ್ ಡ್ಯಾಂ ನಿರ್ಮಾಣ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.