ಗಂಗಾವತಿ: ಭಾರತ ಹಾಗೂ ಚೀನಾ ಗಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಘರ್ಷಣೆಯಲ್ಲಿ ಸಾವನ್ನಪ್ಪಿದ ಭಾರತೀಯ ವೀರ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರ ಕಾಂಗ್ರೆಸ್ ಘಟಕದಿಂದ ಕೃಷ್ಣದೇವರಾಯ ವೃತ್ತದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹುತಾತ್ಮ ಯೋಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಹುತಾತ್ಮರಿಗೆ ಜಯಘೋಷ ಕೂಗಿ ಸೆಲ್ಯೂಟ್ ಮಾಡುವ ಮೂಲಕ ಗೌರವ ಸಲ್ಲಿಸಿದರು.
ನಗರ ಘಟಕದ ಅಧ್ಯಕ್ಷ ಶಾಮೀದ ಮನಿಯಾರ ಮಾತನಾಡಿ, ಗಡಿಯಲ್ಲಿ ಯೋಧರ ಕಟ್ಟೆಚ್ಚರಿಂದಾಗಿ ಇಂದು ನಾವು ದೇಶದೊಳಗೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿದ್ದೇವೆ. ದೇಶದ ಹಿತಾಸಕ್ತಿ, ಭದ್ರತೆ ವಿಚಾರ ಬಂದಾಗ ಇಡೀ ದೇಶ ಒಂದಾಗಿ ಯೋಧರ ಬೆಂಬಲಕ್ಕೆ ನಿಲ್ಲುವ ಮೂಲಕ ಆತ್ಮಸ್ಥೈರ್ಯ ತುಂಬಬೇಕು ಎಂದು ಕರೆ ಕೊಟ್ಟರು.