ಕೊಪ್ಪಳ: ವಿದೇಶಿ ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುತ್ತಿದ್ದ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ಗಳ ತೆರವಿಗೆ ಸುಪ್ರಿಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಮಾಲೀಕರು ಸ್ವಯಂ ಆಗಿ ಖಾಲಿ ಮಾಡ್ತಿದ್ದಾರೆ.
ವಿರುಪಾಪುರ ಗಡ್ಡೆಯಲ್ಲಿ ರೆಸಾರ್ಟ್ಗಳ ತೆರವಿಗೆ ಇದೇ ಫೆ. 24 ರವರೆಗೂ ರಾಜ್ಯ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ರೆಸಾರ್ಟ್ಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ರೆಸಾರ್ಟ್ ಗಳನ್ನು ತೆರವುಗೊಳಿಸುತ್ತಿದ್ದಾರೆ.
ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುವ ಮುನ್ನವೇ ರೆಸಾರ್ಟ್ ಗಳ ಮಾಲೀಕರು ಜಾಗ ಖಾಲಿ ಮಾಡುತ್ತಿರುವುದು ಕಂಡುಬಂದಿದೆ.