ಬೆಂಗಳೂರು: ಕೊಪ್ಪಳದ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದಾರೆ.
ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದ ಈ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನವನ್ನು ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಕೊಪ್ಪಳ ಗವಿಮಠದ ಭಕ್ತರಿಂದ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಐಸಿಸ್ ಮಾದರಿ ಹತ್ಯೆ: ಕೃತ್ಯವೆಸಗಿದವರನ್ನು ಗಲ್ಲಿಗೇರಿಸುವಂತೆ ಬಿಜೆಪಿ ಆಗ್ರಹ