ETV Bharat / state

ಕೊಪ್ಪಳ: ಟಾಯ್ ಕ್ಲಸ್ಟರ್‌ ನಿರ್ಮಾಣಕ್ಕೆ ಸಿಎಂ ಬಿಎಸ್​ವೈ ಶಂಕುಸ್ಥಾಪನೆ

ತಾಲೂಕಿನ ಭಾನಾಪುರ ಬಳಿ ಸ್ಥಾಪಿತವಾದ ದೇಶದ ಮೊದಲ ಟಾಯ್ ಕ್ಲಸ್ಟರ್​ನ ಏಕಸ್ ಕಂಪನಿಯ ಆಟಿಕೆ ವಸ್ತುಗಳ ತಯಾರಿಕಾ ಘಟಕಕ್ಕೆ ಸಿಎಂ ಇಂದು ಶಂಕುಸ್ಥಾಪನೆ ನೆರವೇರಿಸಿದರು.

Yediyurappa
ಶಂಕುಸ್ಥಾಪನೆ
author img

By

Published : Jan 9, 2021, 4:58 PM IST

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಸ್ಥಾಪಿತವಾದ ದೇಶದ ಮೊದಲ ಟಾಯ್ ಕ್ಲಸ್ಟರ್​ನ ಏಕಸ್ ಕಂಪನಿಯ ಆಟಿಕೆ ವಸ್ತುಗಳ ತಯಾರಿಕಾ ಘಟಕಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಭೂಮಿಪೂಜೆ ನೆರವೇರಿಸಿದರು.

ಭಾನಾಪುರ ಗ್ರಾಮದ ಬಳಿ ಸ್ಥಾಪನೆಯಾಗಿರುವ ಆಟಿಕೆ ವಸ್ತುಗಳ ತಯಾರಿಕಾ ಘಟಕ ಹಾಗೂ ಕ್ಲಸ್ಟರ್​ನಿಂದ ಈ ಭಾಗದ ಜನರಿಗೆ ಉದ್ಯೋಗ ಅವಕಾಶ ಸಿಗಲಿದೆ. ಈ ದಿಸೆಯಲ್ಲಿ ಏಕಸ್ ಕಂಪನಿ ಕಾರ್ಯೋನ್ಮುಖವಾಗಲಿದೆ ಎಂದು ಏಕಸ್ ಕಂಪನಿಗೆ ಸಿಎಂ ಶುಭ ಹಾರೈಸಿದರು‌‌.

ಟಾಯ್ ಕ್ಲಸ್ಟರ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ

ಅಲ್ಲದೆ ಬಂಡವಾಳ ಸೆಳೆತದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ. ದೇಶದಲ್ಲಿ ಈ ವರ್ಷ ಸೆಳೆತವಾದ ಬಂಡವಾಳದಲ್ಲಿ ಕರ್ನಾಟಕದ್ದು ಶೇ. 41ರಷ್ಟಿದೆ. ಈ ಮೂಲಕ ದೇಶದಲ್ಲಿ ಬಂಡವಾಳ ಸೆಳೆತದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಪಾರಂಪರಿಕ ಕಿನ್ನಾಳ ಕಲೆಗೆ ಹೆಸರಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಈಗ ಮತ್ತೆ ಆಟಿಕೆ ತಯಾರಿಕಾ ಕ್ಲಸ್ಟರ್ ಸ್ಥಾಪನೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇಲ್ಲಿ ಸುಮಾರು 5 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದೆ. ಸಾವಿರಾರು ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದರು.

ಓದಿ...ಯುವರಾಜ್‌ ಕೊಟ್ಟ ತಟ್ಟೆ ನೋಡಿಯೇ ದಿಗಿಲಾಗಿತ್ತು... ಆತನ ಮನೆಗೆ ಹೋಗಿದ್ದು ತಪ್ಪಾಯ್ತೇನೋ: ಸಚಿವ ವಿ.ಸೋಮಣ್ಣ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಈ ಕ್ಲಸ್ಟರ್ ಮಹತ್ವದ್ದಾಗಲಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೃಷಿ ಮತ್ತು ಕೈಗಾರಿಕೆಗಳೆರಡಕ್ಕೂ ನಮ್ಮ ಸರ್ಕಾರ ಸಮಾನ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಮಹತ್ತರವಾದ ಸುಧಾರಣೆಗಳನ್ನು ಜಾರಿಗೊಳಿಸಿದೆ. ಕೈಗಾರಿಕಾ ನೀತಿಯ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲ ವಾತಾವರಣ ಸೃಷ್ಟಿಸುವುದು ಸೇರಿದಂತೆ ಅನೇಕ ಮಹತ್ತರ ಕ್ರಮಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಈ ವೇಳೆ ಸಚಿವರಾದ ಜಗದೀಶ ಶೆಟ್ಟರ್, ಬಿ.ಸಿ.ಪಾಟೀಲ್, ಸಂಸದ ಸಂಗಣ್ಣ ಕರಡಿ, ಆರ್.ವಿ.ದೇಶಪಾಂಡೆ, ಶಾಸಕ ಹಾಲಪ್ಪ ಆಚಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.