ಕೊಪ್ಪಳ: ನಗರದ ಗವಿಮಠದ ವೃದ್ದಾಶ್ರಮವನ್ನು 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊಪ್ಪಳದ ಗವಿ ಸಿದ್ದೇಶ್ವರ ಮಠದ ವೃದ್ಧಾಶ್ರಮವನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಗೌರವ ಪೂರ್ವಕ ಧನ್ಯವಾದಗಳು. ಸಂಕಷ್ಟದ ಸಮಯದಲ್ಲಿ ಜನರ ನೆರವಿಗಾಗಿ ಇಂತಹ ಅಗತ್ಯ ಸೇವಾ ಕಾರ್ಯಕ್ಕೆ ತಾವು ಮುಂದಾಗಿರುವುದು ಮಾದರಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಧನ್ಯವಾದ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಗವಿಮಠದ ಹಾಸ್ಟೆಲ್ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ