ETV Bharat / state

'ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ': ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ - CM Siddaramaiah

CM Siddaramaiah in koppal: ಇಂದು ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Nov 2, 2023, 3:07 PM IST

Updated : Nov 2, 2023, 8:10 PM IST

ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿಕ್ರಿಯೆ

ಕೊಪ್ಪಳ: ನರೇಗಾ ಯೋಜನೆಯಡಿ ರಾಜ್ಯಕ್ಕೆ ಬರಬೇಕಿರುವ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ಒಂದು ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದ್ದು, ಇಲ್ಲಿಯವರೆಗೂ ನಯಾಪೈಸೆ ಕೊಟ್ಟಿಲ್ಲ. ಬರ ಪರಿಹಾರವನ್ನೂ ನೀಡಿಲ್ಲ. ರಾಜ್ಯದ ಬಗ್ಗೆ ಅವರು ಮಲತಾಯಿ ಧೋರಣೆ ತಾಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ದೂರಿದ್ದಾರೆ.

ತಾಲೂಕಿನ ಬಸಾಪೂರ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಶಾಸಕ, ಸಚಿವರನ್ನೇ ಭೇಟಿ ಆಗಲು ಸಮಯ ನೀಡುತ್ತಿಲ್ಲ. ಇನ್ನು ನಮ್ಮ ಭೇಟಿಗೆ ಏನು ಅವಕಾಶ ಕೊಡುತ್ತಾರೆ? ರಾಜ್ಯ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದದಿಂದ ಹಣ ಬಿಡುಗಡೆ ಮಾಡಿಸಲಿ" ಎಂದರು.

ಮುಂದುವರೆದು ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗುತ್ತಾರಾ? ಎಂಬ ವಿಚಾರಕ್ಕೆ ಸರಿಯಾಗಿ ಪ್ರತಿಕ್ರಿಯಿಸದ ಸಿಎಂ, "ನಮ್ಮದೇ ಸರಕಾರ ಐದು ವರ್ಷ ಇರಲಿದೆ. ಏಕೆಂದರೆ ಹಿಂದಿನ ಬಿಜೆಪಿ ಸರಕಾರ ರಾಜ್ಯವನ್ನು ದಿವಾಳಿ ಎಬ್ಬಿಸಿತ್ತು. ಇದರ ನಡುವೆಯೇ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ನಮ್ಮ ಯಾವ ಶಾಸಕರು ಅಸಮಾಧಾನಗೊಂಡಿಲ್ಲ" ಎಂದು ವಿಷಯಾಂತರ ಮಾಡಿದರು.

ಬಿಜೆಪಿ ಸಂಸದರು ಬರ ಪರಿಹಾರಕ್ಕೆ ಕೇಂದ್ರವನ್ನು ಆಗ್ರಹಿಸಿ: "ಬರ ತಾಂಡವಾಡುತ್ತಿರುವಾಗ ಜನರಿಗೆ ಅನುಕೂಲ ಕಲ್ಪಿಸುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕೀಯ ಮಾಡುತ್ತಿದೆ. ತಾವು ತಮ್ಮ ಪಾಲಿನ ಅನುದಾನ ನೀಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬಿಜೆಪಿ ಬರ ಅಧ್ಯಯನ ಬಿಟ್ಟು, ಕೇಂದ್ರ ಸರಕಾರದಿಂದ ಬರ ಪರಿಹಾರ ಕೊಡಿಸುವ ಕೆಲಸ ಮಾಡಬೇಕು. ರಾಜ್ಯದಲ್ಲಿ 25 ಜನ ಸಂಸದರಿದ್ದು, ಇವರೆಲ್ಲ ಏನು ಮಾಡುತ್ತಿದ್ದಾರೆ?" ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ನಲ್ಲಿ ಅಸಮಾಧಾನವಿಲ್ಲ: "ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ‌ ರಾಜ್ಯಕ್ಕೆ ಬರುತ್ತಿರುವುದು ಅಸಮಾಧಾನ ಶಮನಕ್ಕಲ್ಲ. ಲೋಕಸಭಾ ಚುನಾವಣೆಯ ತಯಾರಿಗಾಗಿ ಬರುತ್ತಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. 6 ತಿಂಗಳಲ್ಲಿ ಸರಕಾರ ಬೀಳುತ್ತದೆ ಎಂದು ಯತ್ನಾಳ್ ಹಗಲು ಗನಸು ಕಾಣುತ್ತಿದ್ದಾರೆ. ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ. ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಸಂಸದರು ಅನುದಾನ ಬಿಡುಗಡೆ ಮಾಡಿಸಿಕೊಂಡು ಬರಲಿ" ಎಂದು ಸವಾಲೆಸೆದರು.

ಬರ ತಾಂಡವಾಡುತ್ತಿರುವಾಗ ಶಾಸಕರು ವಿದೇಶ ಪ್ರವಾಸ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಸರಕಾರದ ಖರ್ಚಿನಲ್ಲಿ ಶಾಸಕರು ಪ್ರವಾಸ ಹೋಗುತ್ತಿಲ್ಲ. ಸ್ವಂತ ದುಡ್ಡಿನಿಂದ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಪ್ರವಾಸಕ್ಕೆ ಹೋಗುವುದು ಅವರ ವೈಯಕ್ತಿಕ ವಿಚಾರವಾಗಿದೆ. ಹೋದರೆ ತಪ್ಪೇನು...? ಎಂದು ಮರು ಪ್ರಶ್ನಿಸಿದರು. ಹಾಗೇ ಮಾತನಾಡುತ್ತಾ ಇಂಧನ ಇಲಾಖೆ ವ್ಯಾಪ್ತಿಯ ರೈತರ ಕೃಷಿ ಸಲಕರಣೆ ನೀಡುವ ಯೋಜನೆ ಸೆ.22 ರಿಂದ ಸ್ಥಗಿತಗೊಂಡಿದೆ ಎಂಬ ಮಾಹಿತಿ ನಿಮ್ಮಿಂದಲೇ ತಿಳಿದಿದೆ. ಈ ವಿಚಾರ ನನ್ನ ಗಮನಕ್ಕಿಲ್ಲ. ಅದನ್ನು ಪರಿಶೀಲಿಸಿ, ಯೋಜನೆ ಯಥಾಸ್ಥಿತಿ ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ನಿತ್ಯ ಮೋದಿ ವಿರುದ್ಧ ಮಾತಾಡುವ ನಿಮ್ಮನ್ನು ಯಾರು ಹತ್ತಿರ ಬಿಟ್ಟುಕೊಳ್ತಾರೆ?: ಯಡಿಯೂರಪ್ಪ

Last Updated : Nov 2, 2023, 8:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.