ಕೊಪ್ಪಳ: ಲಾರಿ ಮತ್ತು ಇಂಡಿಕಾ ಕಾರು ನಡುವೆ ಡಿಕ್ಕಿ ಸಂಭವಿಸಿ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದಿದೆ. ಕಾರಿನ ಟೈರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ರಾಜಪ್ಪ ಬನಗೋಡಿ (40), ರಾಘವೇಂದ್ರ ಕಾಂಬಳೆ (24), ಅಕ್ಷಯ ಶಿವಶರಣ (21), ಜಯಶ್ರೀ (26), ಚಿಕ್ಕ ಮಕ್ಕಳಾದ ರಾಕಿ (4) ಹಾಗೂ ರಕ್ಷಿತಾ (2) ಎಂಬುವವರೇ ಮೃತರು ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ಕಾರಿನಲ್ಲಿ ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರಿನ ಟೈರ್ ಸ್ಫೋಟಿಸಿದೆ. ಪರಿಣಾಮ ಇನ್ನೊಂದು ಬದಿಯ ರಸ್ತೆಗೆ ಬಂದು ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಲಾರಿ ವೇಗವಾಗಿ ಚಲಿಸುತ್ತಿದ್ದರಿಂದ ಕಾರು ಸಂಪೂರ್ಣ ಲಾರಿಯ ಕೆಳಗಡೆ ನುಸುಳಿದೆ. ಕಾರಿನಿಂದ ಮೃತದೇಹಗಳನ್ನು ಹೊರಗಡೆ ತೆಗೆಯಲು ಸ್ಥಳಿಯರು ಹರಸಾಹಸ ಪಡಬೇಕಾಯಿತು. ಅಲ್ಲದೇ, ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರಿನ ಚಾಲಕನ ನಿರ್ಲಕ್ಷತನದಿಂದ ಈ ದುರ್ಘಟನೆ ಸಂಭವಿಸಿದೆ. ಇಳಕಲ್ ಕಡೆಗೆ ಈ ಲಾರಿ ಹೊರಟಿತ್ತು. ಡಿಕ್ಕಿ ಹೊಡೆದ ರಭಕ್ಕೆ ಲಾರಿಯ ಮುಂಭಾಗದಲ್ಲಿ ಕಾರು ಸಿಲುಕಿಕೊಂಡಿತ್ತು. ಇದರಿಂದ ಕಾರನ್ನು ಓರಿಟಿಲ್ ಕಂಪನಿಗೆ ಸೇರಿದ ವಾಹನದ ಮೂಲಕ ಹೊರ ತೆಗೆಯಲು ಸಾಕಷ್ಟು ಪ್ರಯತ್ನಿಸಲಾಯಿತು. ಆದರೆ, ಇದು ವಿಫಲವಾದ ಹಿನ್ನೆಲೆಯಲ್ಲಿ ಕ್ರೇನ್ ಮೂಲಕ ಕಾರನ್ನು ಹೊರ ತೆಗೆಯಲಾಯಿತು. ಎಲ್ಲ ಮೃತ ದೇಹಗಳನ್ನು ಆ್ಯಂಬುಲೆನ್ಸ್ ಮೂಲಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು. ಈ ಘಟನೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
— CM of Karnataka (@CMofKarnataka) May 28, 2023 " class="align-text-top noRightClick twitterSection" data="
ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ,…
">ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
— CM of Karnataka (@CMofKarnataka) May 28, 2023
ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ,…ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
— CM of Karnataka (@CMofKarnataka) May 28, 2023
ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ,…
ಪರಿಹಾರ ಘೋಷಿಸಿದ ಸಿಎಂ: ಈ ದುರಂತದಲ್ಲಿ ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಜನತೆಗೆ ಅವರು ತಿಳಿಸಿದ್ದಾರೆ.
ನೀರಿನಲ್ಲಿ ಮುಳುಗಿ ನಾಲ್ವರು ಸಾವು: ಮತ್ತೊಂದೆಡೆ, ನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ಇಂದು ಜುರಗಿದೆ. ಬೆಂಗಳೂರಿನ ಆರ್ಟಿ ನಗರದ ಯುವಕರು ಬೈಕ್ನಲ್ಲಿ ನಂದಿ ಬೆಟ್ಟಕ್ಕೆ ಬಂದಿದ್ದರು. ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಈಜಲು ಹೋಗಿದ್ದರು.
ಇದನ್ನೂ ಓದಿ: ಬೆಂಗಳೂರಲ್ಲಿ ವೃದ್ಧೆಯ ಕೈಕಾಲು ಕಟ್ಟಿ ಹತ್ಯೆಗೈದು ದರೋಡೆ