ಗಂಗಾವತಿ: ಗೃಹ ರಕ್ಷಕ ದಳದ ಕಮಾಂಡೆಂಟ್ ಆಗಿದ್ದ ಬಿ. ರಾಮಣ್ಣ, ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಒಂದು ಲಕ್ಷ ರೂ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ ರಾಮಣ್ಣ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಧನಸಹಾಯ ನೀಡುವ ಮೂಲಕ ಮಾದರಿಯಾಗಿದ್ದಾರೆ ಎಂದು ಸಿಬ್ಬಂದಿ ವರ್ಗ ಶ್ಲಾಘಿಸಿದ್ದಾರೆ.