ETV Bharat / state

ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ: ಆಕ್ಷೇಪಿಸಿದ್ದಕ್ಕೆ ಅವಹೇಳನ, ಗಂಗಾವತಿಯಲ್ಲಿ ಉದ್ವಿಗ್ನತೆ - Prayer at in Gangavati public place

ಲಕ್ಷ್ಮಿ ಕ್ಯಾಂಪಿನ ಸರ್ಕಾರಿ ಶಾಲೆಯಲ್ಲಿ ಕೊರೊನಾ ಹಿನ್ನೆಲೆ ಹಿರಿಯರಿಗೆ ಅನುಕೂಲವಾಗಲಿ ಎಂದು ಪ್ರಾರ್ಥನೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಮಕ್ಕಳ ಶೈಕ್ಷಣಿಕ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ಶಾಲೆ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವುದಕ್ಕೆ ನಗರಸಭೆ ಸದಸ್ಯ ರಮೇಶ ಚೌಡ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

communal conflict near the  Lakshmi camp of Gangavati near the Anjaneya temple

author img

By

Published : May 31, 2022, 10:01 PM IST

Updated : May 31, 2022, 10:51 PM IST

ಗಂಗಾವತಿ(ಕೊಪ್ಪಳ): ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಲಕ್ಷ್ಮಿ ಕ್ಯಾಂಪಿನ ಘಂಟೆ ಆಂಜನೇಯ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ. ಸಂಘಟನೆಯ ಯುವಕರು ಗುಂಪುಗೂಡುತ್ತಿದ್ದಂತೆಯೇ ವ್ಯಕ್ತಿ ನಾಪತ್ತೆಯಾಗಿದ್ದಾನೆ.

ಲಕ್ಷ್ಮಿ ಕ್ಯಾಂಪಿನ ಸರ್ಕಾರಿ ಶಾಲೆಯಲ್ಲಿ ಕೊರೊನಾ ಹಿನ್ನೆಲೆ ಹಿರಿಯರಿಗೆ ಅನುಕೂಲವಾಗಲಿ ಎಂದು ಪ್ರಾರ್ಥನೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಬಳಿಕ ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಮಕ್ಕಳ ಶೈಕ್ಷಣಿಕ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ಶಾಲೆ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವುದಕ್ಕೆ ನಗರಸಭೆ ಸದಸ್ಯ ರಮೇಶ ಚೌಡ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ: ಆಕ್ಷೇಪಿಸಿದ್ದಕ್ಕೆ ಅವಹೇಳನ, ಗಂಗಾವತಿಯಲ್ಲಿ ಉದ್ವಿಗ್ನತೆ

ಇದರಿಂದ ಅಸಮಾಧಾನಗೊಂಡ ಅನ್ಯಕೋಮಿನ ವ್ಯಕ್ತಿ ಸಂಘಟೆಯ ಸದಸ್ಯರ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾನೆ ಎನ್ನಲಾಗ್ತಿದೆ. ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ನಗರಸಭಾ ಕಮಿಷನರ್ ವಿರೂಪಾಕ್ಷ ಮೂರ್ತಿ, ನಗರಠಾಣೆಯ ಪಿ ಐ ವೆಂಕಟಸ್ವಾಮಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: 'ಸುಳ್ಳು ಹೇಳಬಾರದು' ಪಠ್ಯದಿಂದ ಕಿತ್ತುಹಾಕಿ: ಸಾಹಿತಿ ಬೊಳುವಾರು ಮಹಮದ್ ಕುಂಞಿ

Last Updated : May 31, 2022, 10:51 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.