ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ಈ ಹಿಂದಿನ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್ ವಿರುದ್ಧ ಸಹೋದ್ಯೋಗಿ ಸಂತ್ರಸ್ತೆ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನಲ್ಲಿ 2018ರ ಸೆಪ್ಟಂಬರ್ ತಿಂಗಳಿನಲ್ಲಿ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್ ಅವರು ಕೊಪ್ಪಳದಿಂದ ಕುಷ್ಟಗಿಗೆ ವರ್ಗವಾಗಿ ಬಂದಿದ್ದರು. ನಾನು ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರತರಾಗಿದ್ದಾಗ ಆಗಾಗ ಫೋನ್ ಮಾಡುವುದು, ಅಸಭ್ಯವಾಗಿ ಮಾತನಾಡಿ ತೊಂದರೆ ನೀಡುತ್ತಿದ್ದರು. ಅಲ್ಲದೆ, ಈ ವಿಷಯವನ್ನು ಮನೆಯಲ್ಲಿ ತಿಳಿಸಿದರೆ ತೊಂದರೆಯಾಗುತ್ತದೆ ಎಂದು ಹೆದರಿಸಿದ್ದರು. ಭಯಕ್ಕೆ ನಾನು ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಇದೀಗ ಈ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಮಾಧ್ಯಮದಲ್ಲಿ ಪ್ರಸಾರವಾಗಿದೆ.
ಘಟನೆಯಿಂದ ನೊಂದಿದ್ದು, ಈ ಬಗ್ಗೆ ಕುಟುಂಬದವರ ಗಮನಕ್ಕೆ ತಂದು ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದೇನೆ. ಪಿಎಸ್ಐ ಚಿತ್ತರಂಜನ್ ನಾಯಕ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಕೆ.ಎಂ. ಗುರುಬಸವರಾಜ್ ಸದ್ಯ ಜಿಲ್ಲಾ ನಗರಾಭಿವೃಧ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.