ETV Bharat / state

ಅಭ್ಯರ್ಥಿ ಘೋಷಣೆ ಮಾಡಿದ ಸಿದ್ದರಾಮಯ್ಯ ವಿರುದ್ಧ ಎಐಸಿಸಿಗೆ ದೂರು

author img

By

Published : Nov 21, 2022, 10:08 PM IST

ಕೊಪ್ಪಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಿಲ್ಲಾ ಪಂಚಾಯಿತ್​​ನ ಮಾಜಿ ಅಧ್ಯಕ್ಷ ಮುಕುಂದರಾವ್ ಭವಾನಿಮಠ ಎಐಸಿಸಿಗೆ ದೂರು ನೀಡಿದ್ದಾರೆ.

complaint-to-aicc-against-siddaramaiah
ಅಭ್ಯರ್ಥಿ ಘೋಷಣೆ ಮಾಡಿದ ಸಿದ್ದರಾಮಯ್ಯ ವಿರುದ್ಧ ಎಐಸಿಸಿಗೆ ದೂರು

ಗಂಗಾವತಿ : ಕೊಪ್ಪಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡೆಯನ್ನು ಖಂಡಿಸಿ ಕೊಪ್ಪಳದ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ಮುಕುಂದರಾವ್ ಭವಾನಿಮಠ ಎಐಸಿಸಿಗೆ ದೂರು ನೀಡಿದ್ದಾರೆ.

ಮೀಸಲು ವಿಧಾನಸಭಾ ಕ್ಷೇತ್ರವಾಗಿರುವ ಕನಕಗಿರಿಯಿಂದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಮುಕುಂದರಾವ್ ಭವಾನಿಮಠ, ಸಿದ್ದರಾಮಯ್ಯ ಅವರ ಅನಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದಲ್ಲಿ ಒಂದು ನೀತಿ ನಿಯಮವಿದೆ. ಯಾರನ್ನು ಯಾವ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬುವುದು ಎಐಸಿಸಿಯಲ್ಲಿ ನಿರ್ಧಾರವಾಗುತ್ತದೆ. ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್​ ನಿರ್ಧಾರ ಕೈಗೊಳ್ಳುವುದಿಲ್ಲ. ಮಾಜಿ ಸಿಎಂ ಆಗಿ ಪಕ್ಷದ ನೀತಿ ಸಿದ್ಧಾಂತಗಳು ಗೊತ್ತಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಅಂತಿಮಗೊಳಿಸಿಬೇಕಿದ್ದ ನಿರ್ಧಾರಗಳನ್ನು ದಿಢೀರ್ ಎಂದು ಸಾರ್ವಜನಿಕವಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದು ಸರಿಯಲ್ಲ. ಇದರಿಂದ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಭವಾನಿಮಠ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗಂಗಾವತಿ ವಿಧಾನಸಭಾ ಕ್ಷೇತ್ರದ ಒಣಬಳ್ಳಾರಿಯಲ್ಲಿ ಭಾನುವಾರ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, ಕೊಪ್ಪಳ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು. ಇದೀಗ ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ : ಹಾಲಿನ‌ ದರ ಏರಿಕೆಯಿಂದ ರೈತರಿಗೆ, ಗ್ರಾಹಕರಿಗೆ ಸಮಸ್ಯೆ ಆಗಬಾರದೆಂದು ಕೆಎಂಎಫ್​ಗೆ ಸೂಚನೆ: ಸಿಎಂ ಬೊಮ್ಮಾಯಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.