ETV Bharat / state

ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಗೆಲ್ಲುವ ಅವಕಾಶವಿದೆ: ಸತೀಶ್ ಜಾರಕಿಹೊಳಿ - kushtagi koppala latest news

ನಾನು ಕೂಡ ಈ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದೇನೆ. ನಾನು ಕೂಡ ಅಭ್ಯರ್ಥಿ ಆಗಿದ್ದು, ನನ್ನ ಚುನಾವಣೆ ಮುಖ್ಯ ಅಲ್ಲ, ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ ತುರ್ವಿಹಾಳ ಪರ ಮತ‌ಯಾಚನೆ ಮುಖ್ಯವಾದ ಕಾರಣ ಆಗಮಿಸಿರುವೆ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

satish jarakiholi
ಸತೀಶ್ ಜಾರಕಿಹೊಳಿ
author img

By

Published : Apr 15, 2021, 2:33 PM IST

ಕುಷ್ಟಗಿ (ಕೊಪ್ಪಳ): ಕಾಂಗ್ರೆಸ್ ಪಕ್ಷಕ್ಕೆ ಮೂರು ಉಪಚುನಾವಣೆಗಳಲ್ಲಿ ಗೆಲ್ಲುವ ಅವಕಾಶವಿದೆ ಎಂದು ಬೆಳಗಾವಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ

ಮಸ್ಕಿ ವಿಧಾನಸಭೆ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಪರ ಮತಯಾಚನೆಗೆ ಆಗಮಿಸಿದ್ದ ಅವರು, ಕುಷ್ಟಗಿ ತಾಲೂಕಿನ ತಾವರಗೇರಾ ಮೆಘಾ ರೆಸಿಡೆನ್ಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಕೂಡ ಈ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದೇನೆ. ನಾನು ಕೂಡ ಅಭ್ಯರ್ಥಿ ಆಗಿದ್ದು, ನನ್ನ ಚುನಾವಣೆ ಮುಖ್ಯ ಅಲ್ಲ. ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ ತುರ್ವಿಹಾಳ ಪರ ಮತ‌ಯಾಚನೆ ಮುಖ್ಯವಾದ ಕಾರಣ ಆಗಮಿಸಿರುವೆ ಎಂದರು.

ಸಿಡಿಯಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗಿಯಾದ ರಾಜ್ಯದ ಯಾತ್ರಿಗಳಿಗೆ ಕೋವಿಡ್ ತಪಾಸಣೆ ಕಡ್ಡಾಯ

ಇದಕ್ಕೂ ಮುನ್ನ ತಾವರಗೇರಾ ಹೆಲಿಪ್ಯಾಡ್​​ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸತೀಶ್​ ಜಾರಕಿಹೊಳಿ, ಮಸ್ಕಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಿಮ್ಮ ಸ್ನೇಹಿತರು, ಸಂಬಂಧಿಕರಿಗೆ ಹೇಳಿ ಬಸನಗೌಡ ತುರ್ವಿಹಾಳ ಅವರ ಐತಿಹಾಸಿಕ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.