ETV Bharat / state

ರಾಜ್ಯದ ಆರ್ಥಿಕ ಸ್ಥಿತಿ ಸರಿದಾರಿಗೆ ತರುವ ಶಕ್ತಿ ಸಿದ್ದರಾಮಯ್ಯಗೆ ಮಾತ್ರ ಇದೆ ; ಶಾಸಕ ರಾಘವೇಂದ್ರ ಹಿಟ್ನಾಳ್ - ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿ

ಹಿಂದಿನ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿ ನೀಡಿರುವ ಯೋಜನೆಗಳಿಂದ ರಾಜ್ಯದ ಜನರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಬಯಸಿದ್ದಾರೆ‌. ಹೀಗಾಗಿ, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಬೇಡ. ರಾಜ್ಯದಲ್ಲಿ ಮುಂದುವರಿಯಲಿ..

congress mla raghavendra hitnal statement on siddaramaiah
ಶಾಸಕ ರಾಘವೇಂದ್ರ ಹಿಟ್ನಾಳ್ ಮಾತು
author img

By

Published : Oct 10, 2021, 3:47 PM IST

ಕೊಪ್ಪಳ : ಮುಖ್ಯಮಂತ್ರಿಯಾಗಿ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವ ಶಕ್ತಿ ಇದ್ರೆ ಅದು ಸಿದ್ದರಾಮಯ್ಯ ಅವರಿಗೆ ಮಾತ್ರ. ಹೀಗಾಗಿ, ರಾಜ್ಯದ ಜನರು ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂದು ಬಯಸಿದ್ದಾರೆ ಎಂದು ಕೊಪ್ಪಳದ ಕಾಂಗ್ರೆಸ್​ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

ಸಿದ್ದರಾಮಯ್ಯನವರ ಕುರಿತಂತೆ ಶಾಸಕ ರಾಘವೇಂದ್ರ ಹಿಟ್ನಾಳ್ ಬಣ್ಣನೆ ಮಾಡಿರುವುದು..

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ರಾಘವೇಂದ್ರ ಹಿಟ್ನಾಳ್, ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿ ನೀಡಿರುವ ಯೋಜನೆಗಳಿಂದ ರಾಜ್ಯದ ಜನರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಬಯಸಿದ್ದಾರೆ‌. ಹೀಗಾಗಿ, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಬೇಡ. ರಾಜ್ಯದಲ್ಲಿ ಮುಂದುವರಿಯಲಿ ಎಂದ್ರು.

ರಾಜ್ಯದಲ್ಲಿ ದಲಿತ ಸಿಎಂ ಬೇಡಿಕೆಯೂ ಇದೆ. ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬಹುಮತ ಬಂದ ನಂತರ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್​​ ನಿರ್ಧಾರ ಮಾಡಲಿದೆ. ಪ್ರಸ್ತುತ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ.

ಬೆಲೆ ಏರಿಕೆಯಿಂದಾಗಿ ಜನರು ಬಿಜೆಪಿ ವಿರುದ್ಧ ಬೇಸತ್ತಿದ್ದಾರೆ. ಈ ಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಜನರಿಗೆ ಒಲವು ಇದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ. ನಮ್ಮ ಪಕ್ಷದಲ್ಲಿ ಗೊಂದಲವಿಲ್ಲ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು.

ಇದನ್ನೂ ಓದಿ:ನಾನು ಜೆಡಿಎಸ್ ಬಗ್ಗೆ ಮಾತನಾಡೋದೆ ಇಲ್ಲ : ಹೆಚ್​ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.