ಗಂಗಾವತಿ/ಕೊಪ್ಪಳ: ನಗರದ ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸುವ ಮೂಲಕ ಅಭಿವೃದ್ಧಿಗೆ ಅಡ್ಡಗಾಲಾಗಿದ್ದಾರೆ ಎಂದು ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಆಕ್ರೋಶ ವ್ಯಕ್ತಪಡಿಸಿದ್ರು.
14ನೇ ಹಣಕಾಸು ಯೋಜನೆಯಲ್ಲಿ ಬಂದ 6.28 ಕೋಟಿ ರೂ ಮೊತ್ತದ ಅನುದಾನವನ್ನು ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್, ಅಗತ್ಯವಿರುವ ಕಡೆ ಕಾಮಗಾರಿ ಕೈಗೊಳ್ಳಲು ಬಳಸಿಕೊಂಡಿದ್ದಾರೆ. ಎಲ್ಲಿಯೂ ತಾರತಮ್ಯ ಅನುಸರಿಸಿಲ್ಲ. ಆದರೆ ಕಾಂಗ್ರೆಸ್ ಸದಸ್ಯರು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾರ್ಗದರ್ಶನದಲ್ಲಿ ಈ ಬಗ್ಗೆ ಕೋರ್ಟ್ಗೆ ಹೋಗುವ ಮೂಲಕ ನಗರದ ಅಭಿವೃದ್ಧಿಗೆ ಅಡ್ಡಿಪಡಿಸಿದ್ದಾರೆ. ಕೋರ್ಟ್ನಲ್ಲಿ ಈ ಬಗ್ಗೆ ವಿವರಣೆ ನೀಡುತ್ತೇವೆ ಎಂದರು.