ETV Bharat / state

ಭಾಗ್ಯನಗರ ಪಟ್ಟಣ ಪಂಚಾಯತ್​​ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

author img

By

Published : Nov 6, 2020, 4:54 PM IST

ಭಾಗ್ಯನಗರ ಪಟ್ಟಣ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯೆ ಹುಲಿಗೆಮ್ಮ ತಟ್ಟಿ ಅಧ್ಯಕ್ಷೆಯಾದರೆ, ಉಪಾಧ್ಯಕ್ಷರಾಗಿ ಶೇಖಮ್ಮ ದೇವರಮನಿ ಆಯ್ಕೆಯಾಗಿದ್ದಾರೆ. ತಮ್ಮ ಪಕ್ಷದ ಸದಸ್ಯೆ ಅಧ್ಯಕ್ಷೆಯಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Congress won in Bhagyanagar town panchayat election
ಚುನಾವಣೆಯಲ್ಲಿ ಗೆದ್ದ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ಭಾಗ್ಯನಗರ ಪಟ್ಟಣ ಪಂಚಾಯತಿಯ ಉಳಿದ ಅವಧಿಗೆ ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಸಲಾಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹುಲಿಗೆಮ್ಮ ತಟ್ಟಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಶೇಖಮ್ಮ ದೇವರಮನಿ ಆಯ್ಕೆಯಾಗಿದ್ದಾರೆ.

ಒಟ್ಟು 19 ಸದಸ್ಯ ಬಲದ ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ 10 ಬಿಜೆಪಿ, 8 ಜನ ಕಾಂಗ್ರೆಸ್ ಹಾಗೂ ಓರ್ವ ಪಕ್ಷೇತರ ಸದಸ್ಯರು ಇದ್ದಾರೆ. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ನಿಂದ ಹುಲಿಗೆಮ್ಮ ತಟ್ಟಿ, ಬಿಜೆಪಿಯಿಂದ ಲಕ್ಷ್ಮೀಬಾಯಿ ನಾಗೂಸಾ ಮೇಘರಾಜ ನಾಮಪತ್ರ ಸಲ್ಲಿಸಿದ್ದರು. ಎಸ್ಸಿ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶೇಖಮ್ಮ ದೇವರಮನಿ ಹಾಗೂ ಬಿಜೆಪಿಯಿಂದ ದೇವಮ್ಮ ಮಾಲಗಿತ್ತಿ ನಾಮಪತ್ರ ಸಲ್ಲಿಸಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್

ಚುನಾವಣೆಯಲ್ಲಿ ಪಕ್ಷೇತರ ಸದಸ್ಯರೊಬ್ಬರು ಗೈರು ಹಾಜರಾಗಿದ್ದರು‌. ಕಾಂಗ್ರೆಸ್​ನ ಹುಲಿಗೆಮ್ಮ ತಟ್ಟಿ 11 ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಶೇಖಮ್ಮ ದೇವರಮನಿ 11 ಮತ ಪಡೆದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯೆ ಅಧ್ಯಕ್ಷೆಯಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.