ಗಂಗಾವತಿ: ನಗರದ ತಾಲೂಕು ಕ್ರೀಡಾಂಗಣದಲ್ಲಿ ಇನ್ಡೋರ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ, ಶಾಸಕ ಪರಣ್ಣ ಮುನವಳ್ಳಿ ಭೂಮಿ ಪೂಜೆ ನೆರವೇರಿಸಿದರು. ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಶಟಲ್ ಬ್ಯಾಡ್ಮಿಂಟನ್ ಮತ್ತು ಶೆಟಲ್ ಕಾಕ್ ಪಂದ್ಯಾವಳಿಗೆ ಅನುಕೂಲ ಕಲ್ಪಿಸಲು, ಇನ್ಡೋರ್ ಸ್ಟೇಡಿಯಂ ನಿರ್ಮಿಸುವಂತೆ ಒತ್ತಾಯಿಸಲಾಗಿತ್ತು.
ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ, ಸ್ಟೇಡಿಯಂ ನಿರ್ಮಾಣಕ್ಕೆ ₹1.05 ಕೋಟಿ ಮೊತ್ತದ ಅನುದಾನ ಮಂಜೂರಾಗಿದೆ. ಇನ್ನು ಆರು ತಿಂಗಳೊಳಗೆ ಕಾಮಗಾರಿ ಮುಗಿಸಿಕೊಡುವಂತೆ ಶಾಸಕ ಪರಣ್ಣ ಮುನವಳ್ಳಿ, ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.