ಕೊಪ್ಪಳ: ಕೊರೊನಾ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಹಲವಾರು ಪ್ರಯತ್ನಗಳು ಮುಂದುವರೆದಿವೆ.
ಕೊಪ್ಪಳದಲ್ಲಿ ಜನರು ಮನೆಯಿಂದ ಅನಗತ್ಯವಾಗಿ ಹೊರ ಬರದಂತೆ ತಡೆಯಲು ಪೊಲೀಸರು ನಾನಾ ಪ್ರಯತ್ನ ಮುಂದುವರೆಸಿದ್ದಾರೆ. ಡಿವೈಎಸ್ಪಿ ವೆಂಕಟಪ್ಪ ನಾಯಕ್ ನೇತೃತ್ವದಲ್ಲಿ ನಗರ ಠಾಣೆಯ ಪಿಐ ಮೌನೇಶ್ವರ್ ಮಾಲಿ ಪಾಟೀಲ್ ಸೇರಿದಂತೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಬೈಕ್ ಸವಾರಿ ಮಾಡುವ ಮೂಲಕ ನಗರದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು.
ರಾಯಲ್ ಎನ್ಫೀಲ್ಡ್ ಬೈಕ್ ಏರಿ ಹೊರಟ ಡಿವೈಎಸ್ಪಿ ವೆಂಕಟಪ್ಪ ನಾಯಕ್ ನೇತೃತ್ವದ ಪೊಲೀಸರು ನಗರದ ವಿವಿಧ ರಸ್ತೆಯಲ್ಲಿ ಸಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಅನಗತ್ಯವಾಗಿ ಯಾರೂ ಮನೆಯಿಂದ ಹೊರ ಬರದಂತೆ ಸೂಚನೆ ನೀಡಿದರು.