ಗಂಗಾವತಿ (ಕೊಪ್ಪಳ): ನಗರದಲ್ಲಿ ಈಗಾಗಲೆ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಉಪವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಚಿಕ್ಕಜಂತಕ್ಕಲ್, ಢಣಾಪುರದಲ್ಲಿ ತಲಾ ಒಂದು, ನಗರದ ಗಾಂಧಿನಗರ ಹಾಗೂ ಕಿಲ್ಲಾ ಏರಿಯಾದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿವೆ. ಹೀಗಾಗಿ ಆತಂಕಕ್ಕೊಳಗಾದ ಜನ ಆರೋಗ್ಯದಲ್ಲಿ ಕೊಂಚ ಸಮಸ್ಯೆಯಾದರೂ ದಿಢೀರ್ ಎಂದು ಇಲ್ಲಿನ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಅಗತ್ಯವಿಲ್ಲದ್ದಿದ್ದರೂ ಗಂಟಲು ದ್ರವ ಪರೀಕ್ಷೆಗೆ ಮುಂದಾಗುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಈ ಮೊದಲು ದಿನಕ್ಕೆ ಹತ್ತರಿಂದ 15 ಸ್ಯಾಂಪಲ್ ಮಾತ್ರ ಸಂಗ್ರಹಿಸಲಾಗುತ್ತಿತ್ತು. ಆದರೆ ಈಗ ಪಾಸಿಟಿವ್ ಕೇಸ್ಗಳು ಪತ್ತೆಯಾದ ಹಿನ್ನೆಲೆ ಈ ಸಂಖ್ಯೆ 80-90ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.