ಕೊಪ್ಪಳ: ನಗರದ ತಾಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಜನರು ಆಹಾರ ಸಾಮಗ್ರಿಗಳ ಕಿಟ್ ಪಡೆಯಲು ಮುಗಿಬಿದ್ದ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಮಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗಿತ್ತು.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಕ್ಷೇತ್ರದಲ್ಲಿ 15 ಸಾವಿರ ಫುಡ್ ಕಿಟ್ ಹಂಚುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಡವರಿಗೆ ಹಂಚಲು ವಾಹನಗಳಲ್ಲಿ ಫುಡ್ ಕಿಟ್ಗಳನ್ನು ತುಂಬಿಸಿ ನಿಲ್ಲಿಸಲಾಗಿತ್ತು. ಕಿಟ್ ವಿತರಣಾ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮೈದಾನದಲ್ಲಿದ್ದ ಜನರು ವಾಹನಗಳಲ್ಲಿದ್ದ ಫುಡ್ ಕಿಟ್ಗಳನ್ನು ತೆಗೆದುಕೊಳ್ಳಲು ಮುಗಿಬಿದ್ದು ಸಿಕ್ಕಷ್ಟು ತೆಗೆದುಕೊಂಡು ಹೋದರು.
ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಮಂಗಮಾಯವಾಗಿತ್ತು. ಅಲ್ಲದೆ, ಕಾರ್ಯಕ್ರಮಕ್ಕೂ ಮೊದಲು ಸಿದ್ದರಾಮಯ್ಯ ಅವರು ಗವಿಮಠಕ್ಕೆ ಭೇಟಿ ನೀಡಿದ ವೇಳೆಯೂ ನೂರಾರು ಜನರು ಮುತ್ತಿಕೊಂಡು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದರು.