ಗಂಗಾವತಿ (ಕೊಪ್ಪಳ): ಇನ್ನು ಮುಂದೆ ಜಿಲ್ಲೆಯಲ್ಲಿ ಪತ್ತೆಯಾಗುವ ಕೊರೊನಾ ಪಾಸಿಟಿವ್ ಸೋಂಕಿತರು ಒಪ್ಪಿದರೆ ಮಾತ್ರ ಅವರನ್ನು ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗುವುದು. ಇಲ್ಲವಾದಲ್ಲಿ ಅಗತ್ಯ ಸೌಲಭ್ಯ ಇದೆ ಎಂದು ಇಲಾಖೆಗೆ ಮನದಟ್ಟಾದರೆ ಅವರಿಗೆ ಮನೆಯಲ್ಲಿಯೇ ಹೋಂ ಐಸೋಲೇಷನ್ ಸೌಲಭ್ಯ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಹೇಳಿದರು.
ಈ ಬಗ್ಗೆ ಆರೋಗ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಭೆ ನಡೆಸಿ ಮಾತನಾಡಿದ ಅವರು, ಕೊರೊನಾ ಸೋಂಕಿತರನ್ನು ಕ್ವಾರಂಟೈನ್ಗೆ ಒಳಪಡಿಸುವ ಸರ್ಕಾರದ ಗೈಡ್ಲೈನ್ಸ್ ಬದಲಾಗಿದ್ದು, ಅದಕ್ಕೆ ಅನುಗುಣವಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಯಲಿದೆ. ಜಿಲ್ಲೆಯಲ್ಲೂ ಸೋಂಕಿತರನ್ನು ಕ್ವಾರಂಟೈನ್ಗೆ ಒಳಪಡಿಸುವ ನಿಯಮದಲ್ಲಿ ಬದಲಾವಣೆ ಮಾಡಲಾಗುವುದು. ಕೊರೊನಾ ಪಾಸಿಟಿವ್ ಕೇಸಿನ ವ್ಯಕ್ತಿಗಳು ಒಪ್ಪಿದರೆ ಮಾತ್ರ ಕ್ವಾರಂಟೈನ್ ಮಾಡಲಾಗುತ್ತೆ. ಇಲ್ಲವಾದಲ್ಲಿ ಹೋಂ ಐಸೋಲೇಷನ್ ಮಾಡಲು ಅವಕಾಶ ಮಾಡಿಕೊಡಲಾಗುವುದು ಎಂದರು.
ಸದ್ಯ ಕೊಪ್ಪಳ ಜಿಲ್ಲೆಯಲ್ಲಿ ಸೋಂಕಿತರನ್ನು ಕ್ವಾರಂಟೈನ್ಗೆ ಒಳಪಡಿಸುವ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ.