ETV Bharat / state

ಆದಷ್ಟು ಬೇಗ ಕೊರೊನಾದಿಂದ ಗುಣಮುಖನಾಗಿ ನಿಮ್ಮೆ ಸೇವೆಗೆ ಬರುವೆ: ಸಚಿವ ಬಿ.ಸಿ.ಪಾಟೀಲ್​ - Coronavirus disease (COVID-19)

ಕೊರೊನಾ ಸೋಂಕಿಗೆ ಒಳಗಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್​ ಆದಷ್ಷು ಬೇಗ ಗುಣಮುಖರಾಗಿ ನಿಮ್ಮ ಸೇವೆಗೆ ಬರುತ್ತೇನೆ ಎಂದು ಸೆಲ್ಫಿ ವಿಡಿಯೋ ಮೂಲಕ ಹೇಳಿದ್ದಾರೆ.

Minister B.C. Patil
ಸಚಿವ ಬಿ.ಸಿ.ಪಾಟೀಲ್
author img

By

Published : Aug 1, 2020, 1:40 PM IST

ಕೊಪ್ಪಳ: ತಮಗೆ ಕೊರೊನಾ ದೃಢಪಟ್ಟಿರುವ ಕುರಿತು ಸಾಮಾಜಿಕ ತಾಲತಾಣಗಳ ಮೂಲಕ ಖಚಿತಪಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಆದಷ್ಟು ಬೇಗ ಗುಣಮುಖನಾಗುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಸೆಲ್ಫಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ಅವರು, ಈಗ ತಮ್ಮ ಪತ್ನಿಯೊಂದಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ತಪಾಸಣೆಗೆ ಬಂದಿದ್ದೇವೆ. ಎಕ್ಸ್ ರೇ, ಇಸಿಜಿ, ರಕ್ತ ಪರೀಕ್ಷೆ ಮಾಡಿಸಿದ್ದೇವೆ. ಆರೋಗ್ಯವಾಗಿದ್ದೇವೆ. ಕೊರೊನಾ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸೂಚನೆಗಳನ್ನು ಪಾಲಿಸುತ್ತೇವೆ ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ್

ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು. ರಾಜ್ಯದ ಜನತೆ ಮತ್ತು ರೈತರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖರಾಗಿ ನಿಮ್ಮ ಸೇವೆಗೆ ಬರುತ್ತೇವೆ ಎಂಬ ವಿಶ್ವಾಸವಿದೆ. ನಿಮ್ಮ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.