ಕೊಪ್ಪಳ : ಜಿಲ್ಲೆಯಲ್ಲಿ ಇಂದು 15 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 446ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್, ಕೊಪ್ಪಳ ತಾಲೂಕಿನಲ್ಲಿ 2, ಕುಷ್ಟಗಿ ತಾಲೂಕಿನಲ್ಲಿ 2, ಯಲಬುರ್ಗಾ ತಾಲೂಕಿನಲ್ಲಿ 3 ಹಾಗೂ ಗಂಗಾವತಿ ತಾಲೂಕಿನಲ್ಲಿ 8 ಪ್ರಕರಣ ಸೇರಿ ಒಟ್ಟು 15 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈವರೆಗೆ ಒಟ್ಟು 10 ಜನರು ಸೋಂಕಿಗೆ ಬಲಿಯಾಗಿದ್ದಾರೆ.
34 ಜನರು ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 282 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 4 ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, ಉಳಿದವರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇನ್ನು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 18,027 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 16,826 ಜನರ ವರದಿ ನೆಗಿಟಿವ್ ಬಂದಿದೆ. ಇನ್ನೂ 1,201 ಜನರ ವರದಿ ಬರಬೇಕಿದೆ ಎಂದರು.