ಕೊಪ್ಪಳ: ಜಿಲ್ಲೆಯಲ್ಲಿಂದು 167 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,126ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ಗಂಗಾವತಿ 78, ಕೊಪ್ಪಳ 46, ಕುಷ್ಟಗಿ 30 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 13 ಮಂದಿಗೆ ಸೋಂಕು ತಗುಲಿದೆ. ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಅಲ್ಲದೆ, 212 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 1,907 ಜನರು ಗುಣಮುಖರಾಗಿದ್ದಾರೆ. 755 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, ಇನ್ನುಳಿದವರಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 37,277 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 34,603 ಜನರ ವರದಿ ಬಂದಿದೆ. ಇನ್ನೂ 2,671 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.