ಕೊಪ್ಪಳ: ಜಿಲ್ಲೆಯಲ್ಲಿಂದು 182 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 10,126ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ಗಂಗಾವತಿ 57, ಕೊಪ್ಪಳ 44, ಕುಷ್ಟಗಿ 43 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 38 ಪ್ರಕರಣಗಳು ಪತ್ತೆಯಾಗಿವೆ. 270 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 7,900 ಜನರು ಗುಣಮುಖರಾಗಿದ್ದಾರೆ. ಇಂದು 5 ಜನರು ಕೊರೊನಾಗೆ ಬಲಿಯಾಗಿದ್ದು, ಈವರೆಗೆ ಒಟ್ಟು 222 ಸೋಂಕಿತರು ಮೃತಪಟ್ಟಿದ್ದಾರೆ.
1,691 ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, ಇನ್ನುಳಿದವರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.