ಕೊಪ್ಪಳ: ಜಿಲ್ಲೆಯಲ್ಲಿ ನಿನ್ನೆ 308 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ 119, ಗಂಗಾವತಿ 62, ಕುಷ್ಟಗಿ 62 ಹಾಗು ಯಲಬುರ್ಗಾ ತಾಲೂಕಿನ 65 ಪ್ರಕರಣ ಸೇರಿ 308 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 29,105 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈವರೆಗಿನ ಸಾವಿನ ಸಂಖ್ಯೆ 476 ತಲುಪಿದೆ.
ನಿನ್ನೆ ಕೊರೊನಾದಿಂದ 650 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 24,843 ಜನರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 3,786 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 2,608 ಸೋಂಕಿತರು ಹೋಂ ಐಸೋಲೇಷನಲ್ಲಿ ಹಾಗು 1,178 ಸೋಂಕಿತರು ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕೇರಳದಿಂದ ರೆಮ್ಡಿಸಿವಿರ್ ಖರೀದಿಸಿ ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ