ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ವಿರುಪಾಪುರ ಗ್ರಾಮದ 20 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಯುವಕ ಲಾಕ್ಡೌನ್ ಸಡಿಲಿಕೆ ಬಳಿಕ ಕೆಲಸ ಅರಸಿ ತುಮಕೂರು ಜಿಲ್ಲೆಗೆ ತೆರಳಿದ್ದ. ಅಲ್ಲಿನ ಕಾರ್ಮಿಕರೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ, ವಾಪಸ್ ತಮ್ಮೂರಿಗೆ ಮರಳಿದ್ದ. ಈತ ತುಮಕೂರಿನಿಂದ ಬರುವಾಗ ಹೊಸಪೇಟೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ, ಗಂಟಲು ದ್ರವದ ಮಾದರಿ ಪಡೆಯಲಾಗಿತ್ತು.
ಇದೀಗ ಯುವಕನ ವರದಿ ಪಾಸಿಟಿವ್ ಬಂದಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆ್ಯಂಬುಲೆನ್ಸ್ ಮೂಲಕ ಚಿಕಿತ್ಸೆಗೆ ಕರೆದೊಯ್ದಿದ್ದಾರೆ.