ಕೊಪ್ಪಳ : ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಶಾಸಕ ಹಾಲಪ್ಪ ಆಚಾರ್ ಅವರು, ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಖಚಿತಪಡಿಸಿದ್ದಾರೆ. ಶಾಸಕ ಸ್ವಯಂ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್ ಬಂದಿದೆ.
ತಾವು ಆರೋಗ್ಯವಾಗಿದ್ದು, ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿರುವ ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಕೊರೊನಾ ತಪಾಸಣೆಯನ್ನು ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇತ್ತೀಚಿಗೆ ಕೊಪ್ಪಳಕ್ಕೆ ಭೇಟಿ ನೀಡಿದ್ದ ಸಚಿವ ಬಿ ಸಿ ಪಾಟೀಲ್ ಅವರೊಂದಿಗೆ ಶಾಸಕ ಹಾಲಪ್ಪ ಆಚಾರ್ ಕೂಡ ಚರ್ಚಿಸಿದ್ದರು.