ETV Bharat / state

ಕೊಪ್ಪಳದಲ್ಲಿ 134 ಪಾಸಿಟಿವ್ ಕೇಸ್​: ಸೋಂಕಿತರ ಸಂಖ್ಯೆ 12,048ಕ್ಕೆ ಏರಿಕೆ

ಕೊಪ್ಪಳ ಜಿಲ್ಲಾದ್ಯಂತ ಕೊರೊನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಲಿದ್ದು, ಇಂದೂ ಸಹ 134 ನೂತನ ಪ್ರಕರಣಗಳು ದಾಖಲಾಗಿವೆ. 82 ಜನ ಕೊರೊನಾದಿಂದ ಗುಣಮುಖರಾಗಿದ್ದು, ಮೂರು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

File Photo
ಸಂಗ್ರಹ ಚಿತ್ರ
author img

By

Published : Oct 5, 2020, 8:04 PM IST

ಕೊಪ್ಪಳ: ಜಿಲ್ಲೆಯಲ್ಲಿಂದು ನೂತನವಾಗಿ 134 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,048 ಕ್ಕೆ ಏರಿಕೆಯಾಗಿದೆ.

ಗಂಗಾವತಿ ತಾಲೂಕಿನಲ್ಲಿ 45, ಕೊಪ್ಪಳ 49, ಕುಷ್ಟಗಿ 28 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 12 ಪ್ರಕರಣ ಸೇರಿ ಇಂದು ಒಟ್ಟು 134 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 247 ಮಂದಿ ಮೃತಪಟ್ಟಿದ್ದಾರೆ.

ಇಂದು 82 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 10,130 ಜನರು ಗುಣಮುಖರಾಗಿದ್ದಾರೆ. 1,522 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದ್ದು, ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.