ಕೊಪ್ಪಳ: ಶಂಕಿತ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯೊಬ್ಬ ಕೊಪ್ಪಳದಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಜಿಲ್ಲಾಸ್ಪತ್ರೆಯ ಕೊರೊನಾ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕಳೆದ ಫೆ.29ರಂದು ಸೌದಿ ಅರೇಬಿಯಾದಿಂದ ಹೈದರಾಬಾದ್ ಮೂಲಕ ಮೂಲಕ ಈ ವ್ಯಕ್ತಿ ಆಗಮಿಸಿದ್ದ. ಬಳಿಕ ಬಾಗಲಕೋಟೆ, ಲಿಂಗಸಗೂರು, ರಾಯಚೂರು ಭಾಗದಲ್ಲಿ ಈ ವ್ಯಕ್ತಿ ಓಡಾಡಿದ್ದಾನೆ. ಮಾರ್ಚ್ 13ರಿಂದ ಈ ವ್ಯಕ್ತಿ ಕೆಮ್ಮಿನಿಂದ ಬಳಲುತ್ತಿದ್ದು ಈಗ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆತನ ರಕ್ತದ ಮಾದರಿಯನ್ನು ಲ್ಯಾಬ್ಗೆ ಕಳಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಲ್ಯಾಬ್ ವರದಿ ಬಂದ ಬಳಿಕ ಶಂಕಿತ ವ್ಯಕಿಗೆ ಸೋಂಕು ತಗುಲಿದೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ.