ಗಂಗಾವತಿ: ಕೊರೊನಾ ಸೋಂಕಿನ ಲಕ್ಷಣಗಳಾದ ಕೆಮ್ಮು, ಜ್ವರದಿಂದ ನರಳುತ್ತಿದ್ದ ವ್ಯಕ್ತಿಯನ್ನ ಆರೋಗ್ಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ತಾಲೂಕಿನ ಸಂಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮ್ಮಕ್ಯಾಂಪಿನಲ್ಲಿ ನಡೆದಿದೆ.
ಈ ವ್ಯಕ್ತಿ ಕಾಸರಗೋಡಿನಲ್ಲಿ ಕೆಲಸ ಮಾಡುತ್ತಿದ್ದ. ಈಚೆಗೆ ಕೊರಮ್ಮಕ್ಯಾಂಪಿಗೆ ಆಗಮಿಸಿದ್ದು, ಆತನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೆಮ್ಮು - ಜ್ವರದ ಲಕ್ಷಣಗಳು ಕಂಡು ಬಂದಿದೆ. ಈ ಸಂಬಂಧ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಗ್ರಾಮಸ್ಥರು ಹಲವು ಬಾರಿ ಮನೆಯಲ್ಲಿ ಇರುವಂತೆ ಸೂಚಿಸಿದರೂ ಸಾರ್ವಜನಿಕವಾಗಿ ಸಂಚರಿಸುತ್ತಿದ್ದಾನೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಸಂಬಂದ ಅಧಿಕಾರಿಗಳ ದೂರು ನೀಡಲಾಗಿತ್ತು. ಈಗ ಆತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರಂಭದಲ್ಲಿ ಆರೋಗ್ಯ ತಪಾಸಣೆಗೆ ನಿರಾಕರಿಸಿದ್ದ ವ್ಯಕ್ತಿ ಬಳಿಕ ಪೊಲೀಸರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಗಂಟಲು ದ್ರವ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ.