ETV Bharat / state

ಕೊಪ್ಪಳದಲ್ಲಿ 11 ಮಂದಿಗೆ ಪಾಸಿಟಿವ್​: ಕೊರೊನಾ ಸೋಂಕಿತರ ಸಂಖ್ಯೆ13 ಸಾವಿರಕ್ಕೇರಿಕೆ

ಕೊಪ್ಪಳದಲ್ಲಿ ಇಂದು 11 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,256 ಕ್ಕೆ ಏರಿದೆ. ಅಂತೆಯೇ ಇಂದು 40 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Koppal
Koppal
author img

By

Published : Oct 26, 2020, 8:51 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 11 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,256 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 04, ಕೊಪ್ಪಳ ತಾಲೂಕಿನಲ್ಲಿ 03 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 04 ಪ್ರಕರಣ ಸೇರಿ ಇಂದು ಒಟ್ಟು 11 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Koppal
ಜಿಲ್ಲೆಯ ಪಾಸಿಟಿವ್ ಪ್ರಕರಣಗಳು

ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 279 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 40 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,443 ಜನರು ಗುಣಮುಖರಾಗಿದ್ದಾರೆ. 481 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.