ಕೊಪ್ಪಳ: ಜಿಲ್ಲೆಯಲ್ಲಿ ಇಂದು 241 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 7553 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 117, ಕೊಪ್ಪಳ ತಾಲೂಕಿನಲ್ಲಿ 63, ಕುಷ್ಟಗಿ ತಾಲೂಕಿನಲ್ಲಿ 35 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 26 ಪ್ರಕರಣ ಸೇರಿ ಇಂದು ಒಟ್ಟು 241 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 173 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 197 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 5542 ಜನರು ಗುಣಮುಖರಾಗಿದ್ದಾರೆ. 1559 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.