ಗಂಗಾವತಿ: ಕೊರೊನಾ ವೈರಸ್ ಭಾರತಕ್ಕೆ ಕಾಲಿಟ್ಟ ಹಿನ್ನೆಲೆ ಗಂಗಾವತಿ ನಗರದ ಬಹುತೇಕ ಖಾಸಗಿ ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಇಡೀ ವಿಶ್ವವನ್ನೇ ನಡುಗಿಸುತ್ತಿರುವ ಕೊರೊನಾ ಸೋಂಕು ಇದೀಗ ಭಾರತ, ಕರ್ನಾಟಕಕ್ಕೂ ಕಾಲಿಟ್ಟು ಇನ್ನಿಲ್ಲದ ಫಜೀತಿಗೆ ಕಾರಣವಾಗುತ್ತಿದೆ. ಮಕ್ಕಳು ಹಾಗೂ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಖಾಸಗಿ ಶಾಲೆಗಳು ಅನುಸರಿಸುತ್ತಿರುವ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಈಗಾಗಲೇ ತಿಳಿಸಿದೆ.