ಕೊಪ್ಪಳ: ಭಾರತದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಲಾಕ್ಡೌನ್ ಜಾರಿಯಾಗಿದೆ. ಈ ಹಿನ್ನೆಲೆ ಕೊಪ್ಪಳದಲ್ಲೂ ನಿಷೇಧಾಜ್ಞೆ ಜಾರಿಯಾಗಿದೆ. ಆದರೆ ನಗರದಲ್ಲಿ ಜನ ಮಾತ್ರ ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ.
ದಿನ ಬೆಳಗಾದರೆ ಅವಶ್ಯಕ ವಸ್ತುಗಳನ್ನು ಖರೀದಿಸಲು ಜನ ಕೊರೊನಾದ ಭೀತಿ ಇದ್ದರೂ ಪ್ರಾಣದ ಹಂಗು ತೊರೆದು ಯಾವುದೇ ಮುಂಜಾಗ್ರತೆ ಕೈಗೊಳ್ಳದೇ ಗುಂಪು ಗುಂಪಾಗಿ ಸೇರುತ್ತಿದ್ದಾರೆ. ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ಜನ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ. ಜನಜಂಗುಳಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ಜನ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ. ಜನಜಂಗುಳಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದೆ.